ನಾಳೆ ನವೆಂಬರ್ 29 ರಂದು ಶುಕ್ರವಾರ
ಮಧ್ಯಾಹ್ನ 3-00 ಘಂಟೆಗೆ ಹುಬ್ಬಳ್ಳಿಯ ನವನಗರದಲ್ಲಿರುವ ಹೆಸ್ಕಾಂ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಮಾಜಿ ಶಾಸಕರಾದ ಶ್ರೀ ಸೈಯದ್ ಆಜೀಮ್ ಪೀರ ಎಸ್.ಖಾದ್ರಿ ಅವರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ನೂತನ ಅಧ್ಯಕ್ಷರಾಗಿ ತಮ್ಮ ಅಧಿಕಾರವನ್ನು ಸ್ವೀಕರಿಸಲಿದ್ದಾರೆ,
ಈ ಸಮಾರಂಭದಲ್ಲಿ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವರಾದ ಶ್ರೀ ಶಿವಾನಂದ ಪಾಟೀಲರವರು,ಮಾನ್ಯ ಲೋಕಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿರವರು,ಮಾನ್ಯ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಖಾತೆ ಸಚಿವರಾದ ಶ್ರೀ ಬಿ, ಝಡ್, ಜಮೀರ್ ಅಹಮದ್ ಖಾನ್ ರವರು, ಮಾನ್ಯ ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್ ರವರು,ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶ್ರೀ ನಜೀರ್ ಅಹ್ಮದರವರು ಹಾಗೂ ಧಾರವಾಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಗೌರವಾನ್ವಿತ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ,
ಕಾರಣ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ/ಕಿರಿಯ ನಾಯಕರು, ಹಾಲಿ/ಮಾಜಿ ವಿಧಾನ ಪರಿಷತ್ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಮಹಾನಗರ ಪಾಲಿಕೆಯ ಹಾಲಿ/ಮಾಜಿ ಸದಸ್ಯರು, ಪಾಲಿಕೆ ನಾಮ ನಿರ್ದೇಶಿತ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಹುಡಾ ಅಧ್ಯಕ್ಷರು ಹಾಗೂ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ/ ತಾಲೂಕು/ ಗ್ರಾಮ ಪಂಚಾಯತಿಗಳ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮಯಕ್ಕೆ ಸರಿಯಾಗಿ ಬಂದು ಭಾಗವಹಿಸಬೇಕೆಂದು ಉಭಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಲ್ತಾಫಹುಸೇನ ಹಳ್ಳೂರ ಹಾಗೂ ಶ್ರೀ ಅನಿಲಕುಮಾರ್ ಪಾಟೀಲ್ ಅವರು ಕೋರಿದ್ದಾರೆ.